Home ಶಿವಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ
Homeಪ್ರಮುಖ ಸುದ್ದಿ

ಶಿವಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ

Share
Share

ಶಿಕಾರಿಪುರ ಲೈವ್:

ಬಸವಾಧಿಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಬನಸಿರಿ ಲಯನ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಂದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದಿವಂಗತ ತ್ಯಾಗರ್ತಿ ಗೌರಮ್ಮ ಸಿದ್ದಪ್ಪ ದತ್ತಿ ಹಾಗೂ ದಿವಂಗತ ವಕೀಲರಾದ ಅಶೋಕ್ ಪಾಟೀಲ್ ಸ್ಮರಣಾರ್ಥ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿವಶರಣರ ಸಾಹಿತ್ಯ ವಿಷಯ ಕುರಿತು ಅವರು ಮಾತನಾಡಿದರು.

ಬಸವಾಧಿಶರಣರು ನುಡಿದಂತೆ ನಡೆದಿದ್ದರು. ನುಡಿದಂತೆ ನಡೆದ ಕಾರಣ12ನೇ ಶತಮಾನದಲ್ಲಿ ಶರಣರು ನೀಡಿದ ವಚನ ಸಾಹಿತ್ಯದ ಸಂದೇಶಗಳ ವಿಚಾರಧಾರೆಗಳನ್ನು 21ನೇ ಶತಮಾನದಲ್ಲೂ ನಾವು ಅನುಸರಿಸುತ್ತಿದ್ದೇವೆ. ವಚನ ಸಾಹಿತ್ಯ ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು‌.

ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ವಿಷಯ ಕುರಿತು ಮಾತನಾಡಿದ ಜುಬೇದ ಕಾಲೇಜಿನ ಉಪನ್ಯಾಸಕ ಕರಿಬಸಪ್ಪ, ರಾಮಧಾನ್ಯ ಚರಿತ್ರೆ, ಹರಿಕಥೆ ಸಾರ, ನಳಚರಿತ್ರೆ ಸೇರಿದಂತೆ ಹಲವು ಕೃತಿಗಳನ್ನು ಕನಕದಾಸರು ರಚಿಸಿದ್ದಾರೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದ ಜನರ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಿ. ರಮೇಶ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕವಿ ಕುಸ್ಕೂರು ಪ್ರಶಾಂತ್ ಕವನ ವಾಚಿಸಿದರು.

ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಸುಭಾಷ್ ಚಂದ್ರ ಸ್ಥಾನಿಕ್,
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಕೆ.ಎಸ್.ಹುಚ್ರಾಯಪ್ಪ, ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಜಡಿಯಪ್ಪ ಪಸಾರದ, ದತ್ತಿ ಕಾರ್ಯಕ್ರಮ ಸಂಚಾಲಕ ಬಿ. ಬಂಗಾರಪ್ಪ, ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ದೂದಿಹಳ್ಳಿ ಪ್ರವೀಣ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಮಾನತೆಯಿಂದ ಬದುಕಲು ಅಗತ್ಯವಾದ ಸಂವಿಧಾನ ಅಂಬೇಡ್ಕರ್ ನೀಡಿದ್ದಾರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ

ಶಿಕಾರಿಪುರ ಲೈವ್: ದೇಶದಲ್ಲಿ ಎಲ್ಲಾ ಜಾತಿಯ ಜನರು ತಾರತಮ್ಯವಿಲ್ಲದೇ ಸಮಾನತೆಯಿಂದ ಜೀವನ ನಡೆಸಲು ಅಗತ್ಯವಾದ ಸಂವಿಧಾನವನ್ನು...

Home

ಬೈಕ್ ಕಳ್ಳತನ ಆರೋಪಿಗಳು ಹಾಗೂ 16 ಬೈಕ್ ವಶಕ್ಕೆ ಪಡೆದ ಪೊಲೀಸರು

ಶಿಕಾರಿಪುರ ಲೈವ್: ಶಿಕಾರಿಪುರ ಪಟ್ಟಣ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ನಡೆಸಿದ ಆರೋಪಿಗಳನ್ನು ಪಟ್ಟಣ...

Home

ಹಿರಿಯ ವಕೀಲರಾದ ಸದಾಶಿವರೆಡ್ಡಿ ಮೇಲೆ ನಡೆದ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ

ಶಿಕಾರಿಪುರ ಲೈವ್: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಸದಾಶಿವ...

Home

ಸಮಾನತೆಯಿಂದ ಬದುಕಲು ಅಂಬೇಡ್ಕರ್ ಸಂವಿಧಾನ ಸಹಕಾರಿ: ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್

ಶಿಕಾರಿಪುರ ಲೈವ್: ಮನುಷ್ಯ ಸಮಾನತೆಯಿಂದ ಬದುಕಲು ಅಂಬೇಡ್ಕರ್ ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಪುರಸಭೆ ಅಧ್ಯಕ್ಷೆ...