ಶಿಕಾರಿಪುರ ಲೈವ್:
ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ರವಿಕುಮಾರ್ ಆವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು, ಕಳೆದ ಕೆಲವು ವರ್ಷಗಳಿಂದ ಫೆಬ್ರವರಿ 14ರಂದು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ವ್ಯಾಪಾರ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಅನೈತಿಕತೆ ಚಟುವಟಿಕೆಯಲ್ಲಿ ಮುಳುಗುತ್ತಿದೆ. ಪಾರ್ಟಿಗಳಲ್ಲಿ ಯುವಕ,ಯುವತಿಯರು ಮದ್ಯಪಾನ,ಧೂಮಪಾನ, ಮಾದಕ ವಸ್ತುಗಳ ಸೇವನೆ ಮುಂತಾದ ಅನಾಚಾರಗಳಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ ಎಂದು ಆರೋಪಿಸಿದ ಅವರು, ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳಾದ ಪರಶುರಾಮ, ಈರೇಶ್, ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ವಿ.ರಾಮಣ್ಣ ಹಿಂದೂ ಸಂಘಟನೆ ಮುಖಂಡರಾದ ಎಸ್.ವಿ.ಕೆ ಮೂರ್ತಿ, ರಘು, ಬೇಗೂರು ಮಂಜುನಾಥ್, ಮೋಹನ್, ಜಯ ಕರ್ನಾಟಕ ಸಂಘಟನೆ ಶಿವಯ್ಯ ಶಾಸ್ತ್ರಿ ಉಪಸ್ಥಿತರಿದ್ದರು.
Leave a comment