ಶಿಕಾರಿಪುರ ಲೈವ್:
ಅನಿರ್ಧಿಷ್ಠಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ ನೌಕರರ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಹತ್ತು ದಿನಗಳಿಂದ ನಡೆಸುತ್ತಿದ್ದ ಎರಡನೇ ಹಂತದ ಅನಿರ್ಧಿಸ್ಠಾವಧಿ ಮುಷ್ಕರ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಆಧಿಕಾರಿಗಳಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಗ್ರಾಮ ಆಡಳಿತ ಅಧಿಕಾರಿಗಳು ರೈತರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕೆಲಸಕ್ಕೆ ಅಗತ್ಯವಾದ ಮೂಲ ಸೌಲಭ್ಯಗಳಾದ ಮೊಬೈಲ್, ಲ್ಯಾಪ್ ಟಾಪ್, ಪ್ರಿಂಟರ್ ಸೇರಿದಂತೆ ವಿವಿಧ ಪರಿಕರಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು. ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣ ವರ್ಗಾವಣೆಗೆ ಚಾಲನೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಹತ್ತು ದಿನಗಳಿಂದ ನಡೆಸುತ್ತಿರುವ ಅಧಿಕಾರಿಗಳ ಹೋರಾಟಕ್ಕೆ ಸರ್ಕಾರ ಗೌರವ ಕೊಡಬೇಕು. ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸದಿದ್ದರೆ ವಿರೋಧ ಪಕ್ಷವಾಗಿ ಬಿಜೆಪಿ ಗ್ರಾಮ ಆಡಳಿತಾಧಿಕಾರಿಗಳ ಪರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಚ್. ಹರ್ಷ, ಗೌರವಾಧ್ಯಕ್ಷ ಗಿರೀಶ್ ಗೌಡ, ತಾಲ್ಲೂಕು ಕಂದಾಯ ನೌಕರರ ಸಂಘದ ಅಧ್ಯಕ್ಷ ಮಿಥುನ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಮಹಾರುದ್ರಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ನಾಗರಾಜನಾಯ್ಕ, ಗಣೇಶ್, ಯಲ್ಲಾಲಿಂಗ, ಅಸ್ಪಾಕ್ ಆಹಮದ್, ಮಂಜುನಾಥನಾಯ್ಕ, ರಾಹುಲ್ ರಾಥೋಡ್, ಶಿವಾನಂದ್, ಮಹೇಶ್, ಪ್ರವೀಣ್, ಸತೀಶ್, ದಾನೇಶ, ದೀಪಕ್, ವಿಠಲ, ಭಾವನಾ, ಸೀಮಾ, ರುಕ್ಮಿಣಿ, ಸುಮಿತ್ರಾಬಾಯಿ, ರೂಪಾ, ಶಾರದಮ್ಮ, ಗೀತಾ, ಪೂಜಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Leave a comment