ಶಿಕಾರಿಪುರ ಲೈವ್: ತಾಲ್ಲೂಕಿನ ನಿಂಬೆಗೊಂದಿ ಗ್ರಾಮದಲ್ಲಿ ಸೋಮವಾರ ಗುರು ಕೊಟ್ಟೂರೇಶ್ವರ ಸ್ವಾಮಿ ದೇವರ ರಥೋತ್ಸವ ಪ್ರಯುಕ್ತ ನಡೆದ ಕುಸ್ತಿ ಪಂದ್ಯಾವಳಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಗ್ರಾಮೀಣ ಕ್ರೀಡೆಯಾದ ಕುಸ್ತಿ ಕ್ರೀಡೆಯನ್ನು ಯುವಪೀಳಿಗೆ ಉಳಿಸಿ ಬೆಳೆಸಬೇಕು.ರಾಜ ಮಹಾರಾಜರ ಕಾಲದಿಂದ ಕುಸ್ತಿ ಕ್ರೀಡೆಗೆ ಪ್ರೋತ್ಸಾಹ ದೊರೆಯುತ್ತಿದೆ. ಗುರು ಕೊಟ್ಟೂರೇಶ್ವರ ಸ್ವಾಮಿ ದೇವರ ರಥೋತ್ಸವ ಪ್ರಯುಕ್ತ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಕುಸ್ತಿ ಪಂದ್ಯಾವಳಿ ಆಗಮಿಸಿರುವ ಎಲ್ಲಾ ಪೈಲ್ವಾನರಿಗೆ ಸ್ವಾಗತ ಕೊರುತ್ತೇನೆ ಎಂದರು.
ಕುಸ್ತಿ ಪಂದ್ಯಾವಳಿ ಚಾಲನೆ ನೀಡುವ ಮುನ್ನ ಸಂಸದರಾದ ಬಿ.ವೈ. ರಾಘವೇಂದ್ರ ಗುರುಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪೈಲ್ವಾನರು ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದರು.
ಗುರುಕೊಟ್ಟೂರೇಶ್ವರ ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ನಾಗರಾಜಪ್ಪಗೌಡ್ರು, ಪದಾಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
Leave a comment