ಶಿಕಾರಿಪುರ ಲೈವ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ಗುರುವಾರ ಹೋಮ ಹವನ ಹಾಗೂ ರಕ್ತದಾನ ಶಿಬಿರ ನಡೆಸಿದರು.
ಬೆಳಿಗ್ಗೆ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ಯಡಿಯೂರಪ್ಪ ಅವರಿಗೆ ಆಯುಷ್ಯ ಆರೋಗ್ಯ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿ ಪವಮಾನ ಹೋಮ ನಡೆಸಿದರು. ಮಹಿಳಾ ಮುಖಂಡರು ಲಲಿತಾ ಸಹಸ್ತ್ರನಾಮ ಪಾರಾಯಙ ಕಾರ್ಯಕ್ರಮ ನಡೆಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಮಂಗಳ ಭವನದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ,ಗಂಗಮ್ಮ ವೀರಭದ್ರಶಾಸ್ತ್ರಿ ಸ್ಮಾರಕ ಟ್ರಸ್ಟ್ ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.
Leave a comment