ಶಿಕಾರಿಪುರ ಲೈವ್:
ಪಟ್ಟಣದ ಅಕ್ಕಮಹಾದೇವಿ ವೃತ್ತದಲ್ಲಿ ನಿರ್ಮಿಸಿರುವ ಶಿವಶರಣೆ ಅಕ್ಕಮಹಾದೇವಿ ಉದ್ಯಾನವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಉದ್ಯಾನ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಪಟ್ಟಣದಲ್ಲಿ ಬಸವೇಶ್ವರ,ಸಂಗೊಳ್ಳಿ ರಾಯಣ್ಣ,ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅಕ್ಕಮಹಾದೇವಿ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ಈ ಉದ್ಯಾನದ ರೀತಿಯಲ್ಲಿ ಪಟ್ಟಣದಲ್ಲಿರುವ ಎಲ್ಲಾ ಪುತ್ಥಳಿ ಪ್ರತಿಷ್ಠಾಪಿಸಿರುವ ಸ್ಥಳಗಳಲ್ಲಿ ಉದ್ಯಾನ ನಿರ್ಮಾಣಕ್ಕೆಆದ್ಯತೆ ನೀಡಲಾಗುತ್ತದೆ. ಉಡುಗಣಿ ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿಗೆ ಅಗತ್ಯವಾದ ಅನುದಾನ ಒದಗಿಸುವಂತೆ ಹಾಗೂ ಗುತ್ತಿಗೆದಾರರಿಗೆ ಬಾಕಿ ಇರುವ 10ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದರು.
ತಾಲೂಕಿನ ಜನತೆಗೆ ಅಗತ್ಯವಾದ ಏತಾವರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಶಿಕಾರಿಪುರ ನಗರವನ್ನು ಮಾದರಿ ನಗರವನ್ನಾಗಿಸಲು ಶ್ರಮಿಸಿದ್ದೇವೆ. ಅಂಜನಾಪುರ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರನ್ನು ತಂದಿದ್ದೇವೆ. ಮೆಡಿಕಲ್ ಕಾಲೇಜ್ ಆರಂಭಿಸಲು ಪೂರಕವಾಗುವಂತೆ ಸರ್ಕಾರಿ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಿದ್ದೇವೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಗತ್ಯವಾದ ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ಒದಗಿಸಲಾಗಿದೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಶಿಕಾರಿಪುರ ತಾಲೂಕು ಶಿವಶರಣರ ನಾಡಾಗಿದೆ ತಾಲೂಕಿನಲ್ಲಿ ಜನಿಸಿದ ಹುಡುಗನೆಯಲ್ಲಿ ಜನಿಸಿದ ಶಿವಶರಣೆ ಅಕ್ಕಮಹಾದೇವಿ 12ನೇ ಶತಮಾನದಲ್ಲಿ ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿದಿದ್ದರು ನಿಮ್ಮೆಲ್ಲರ ಸಹಕಾರದಿಂದ ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕನಾಗಿ ದ್ದೇನೆ ಶಾಸಕನಾಗಿ ಆಯ್ಕೆಯಾಗಿದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದೇನೆ. ನಿಮ್ಮ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಶಿಕಾರಿಪುರ ತಾಲೂಕು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದೆ ಜನತೆಯ ಅಪೇಕ್ಷೆಗೆ ತಕ್ಕಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹಾಗೂ ಸಂಸದ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಶೈಲಾ ಮಡ್ಡಿ ಯೋಗೀಶ್, ಮಾಜಿ ಅಧ್ಯಕ್ಷ ಕೆ.ಜಿ.ವಸಂತ ಗೌಡ್ರು, ಉಪಾಧ್ಯಕ್ಷೆ ರೂಪ ಮಂಜುನಾಥ ಪಾರಿವಾಳ, ಪುರಸಭೆ ಸದಸ್ಯರಾದ ಲಕ್ಷ್ಮಿ ಮಹಾಲಿಂಗಪ್ಪ, ರೇಖಾಬಾಯಿ ಮಂಜುನಾಥ್ ಸಿಂಗ್, ಸುನಂದಾ ಮಂಜುನಾಥ್, ಕಮಲಮ್ಮ ಹುಲ್ಮಾರ್, ಫೈರೋಜಾಬಾನು, ಸುರೇಶ್, ಜೀನಳ್ಳಿ ಪ್ರಶಾಂತ್, ರೇಣುಕಸ್ವಾಮಿ, ಪಾಲಾಕ್ಷ , ಮೊಹಮದ್ ಸಾಧಿಕ್, ಉಮಾವತಿ, ಡಿ.ಆರ್. ರಾಘವೇಂದ್ರ, ಜಯಶ್ರೀ, ಮುಖ್ಯಾಧಿಕಾರಿ ಭರತ್, ದೊಡ್ಡಪೇಟೆ ವೀರಶೈವ ಸಮಾಜ ಅಧ್ಯಕ್ಷ ಶಿವಾನಂದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ನಿರ್ದೇಶಕ ದೂದಿಹಳ್ಳಿ ಬಸವರಾಜ್, ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಅರ್ಬನ್ ಬ್ಯಾಂಕ್ ನಿರ್ದೇಶಕ ಹದಡಿ ಮಂಜುನಾಥ್ ಉಪಸ್ಥಿತರಿದ್ದರು.
Leave a comment