Home ಪ್ರಮುಖ ಸುದ್ದಿ ಕನ್ನಡ ಭಾಷೆ ಉಳಿಸಿ ಬೆಳೆಸಬೇಕು: ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಕೆ.ಎನ್. ಮಧುಸೂಧನ್ ಸಲಹೆ
ಪ್ರಮುಖ ಸುದ್ದಿ

ಕನ್ನಡ ಭಾಷೆ ಉಳಿಸಿ ಬೆಳೆಸಬೇಕು: ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಕೆ.ಎನ್. ಮಧುಸೂಧನ್ ಸಲಹೆ

Share
Share

ಶಿಕಾರಿಪುರ ಲೈವ್:
ಕನ್ನಡ ಭಾಷೆ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು‌,ಕನ್ನಡ ಭಾಷೆ ಉಳಿಸಿ ಬೆಳೆಸಬೇಕು ಎ‌ಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಎನ್. ಮಧುಸೂಧನ್ ಸಲಹೆ ನೀಡಿದರು.

ಪಟ್ಟಣದ ಚನ್ನಕೇಶವ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಶ್ರೀಮತಿ ಗಿರಿಜಮ್ಮಮತ್ತು ಕುಪ್ಪೇಲೂರು ಚನ್ನಬಸಪ್ಪ ಸಾಲೂರು ದತ್ತಿ ಹಾಗೂ ಚುರ್ಚಿಗುಂಡಿ ಜಿ. ಬಸವನಗೌಡ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಆವರು ಮಾತನಾಡಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ವ್ಯಾಕರಣ ಬದ್ಧವಾದ ಭಾಷೆ ಕನ್ನಡವಾಗಿದೆ. ರಾಷ್ಟ್ರಕವಿ ಕುವೆಂಪು,ಜಿ.ಎಸ್. ಶಿವರುದ್ರಪ್ಪ, ಡಾ.ಯು.ಆರ್. ಅನಂತಮೂರ್ತಿ ಸೇರಿದಂತೆ ಹಲವು ಕವಿಗಳು ಲೇಖಕರು ಕನ್ನಡ ಸಾಹಿತ್ಯವನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ಸಾಹಿತ್ಯ ಓದುವ ಹಾಗೂ ಬರೆಯುವ ಅಭಿರುಚಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು‌ಕನ್ನಡ ಸಾಹಿತ್ಯಕ್ಕೆ ಶಿಕಾರಿಪುರ ತಾಲೂಕಿನ ಕೊಡುಗೆ ವಿಷಯ ಕುರಿತು ಮಾತನಾಡಿದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಿ. ಬಂಗಾರಪ್ಪ, ಕನ್ನಡ ಸಾಹಿತ್ಯದ ಬಗ್ಗೆ ಮಾತನಾಡುವಾಗ ವಚನಸಾಹಿತ್ಯವನ್ನು ಹೊರತುಪಡಿಸಿ ಮಾತನಾಡಲು ಸಾಧ್ಯವಿಲ್ಲ. ತಾಲೂಕಿನಲ್ಲಿ ಜನಿಸಿದ ಅಕ್ಕಮಹಾದೇವಿ ಅಲ್ಲಮಪ್ರಭು ಸತ್ಯಕ್ಕ ಸೇರಿದಂತೆ ಹಲವು ಶರಣರು ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಶರಣರ ವಚನಗಳು ಬದುಕಿನ ಪಾಠಗಳಾಗಿವೆ. ಶರಣರು ಕಾಯಕ ತತ್ವ ಹಾಗೂ ದಾಸೋಹ ತತ್ವದ ಸಂದೇಶ ಸಾರಿದ್ದರು. ಶರಣರ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯ ಚಳುವಳಿಯಲ್ಲಿ ಕನ್ನಡಿಗರ ಪಾತ್ರ
ವಿಷಯ ಕುರಿತು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಪಿ. ಪ್ರಕಾಶ್, ಸ್ವತಂತ್ರ ಹೋರಾಟಕ್ಕೆ ಕನ್ನಡಿಗರು ಅಪಾರವಾದ ಕೊಡುಗೆ ನೀಡಿದ್ದಾರೆ. ಕಿತ್ತೂರಾಣಿ ಚೆನ್ನಮ್ಮ, ಸಂಗೊಳ್ಳಿರಾಯಣ್ಣ,ಹೈದರ್ ಆಲಿ, ಟಿಪ್ಪು ಸುಲ್ತಾನ್ ,ದೊಂಡಿಯವಾಘ ಸೇರಿದಂತೆ ಹಲವರು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಸ್ವಾತಂತ್ಯ ಹೋರಾಟದಲ್ಲಿ ತಾಲ್ಲೂಕಿನ ಈಸೂರು ಗ್ರಾಮದ ಹೋರಾಟ ಮಹತ್ವದ್ದಾಗಿದೆ. ಈಸೂರು ಮೊದಲ ಸ್ವತಂತ್ರ ಗ್ರಾಮ ಎಂದು ಘೋಷಿಸಿಕೊಂಡ ಗ್ರಾಮವಾಗಿದೆ. ಸ್ವತಂತ್ರಕ್ಕಾಗಿ ಈಸೂರಿನ ಹಲವು ಹೋರಾಟಗಾರರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎಸ್. ರಘು ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಕೆ.ಎಸ್. ಹುಚ್ರಾಯಪ್ಪ. ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಬಿ. ಪಾಪಯ್ಯ, ದತ್ತಿ ಕಾರ್ಯಕ್ರಮ ಸಂಚಾಲಕರು ಹಾಗೂ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರಾದ ರಜನಿ‌, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿ ಡಾ.ಪ್ರಕಾಶ್, ಸದಸ್ಯರಾದ ಸಂದೀಪ್, ಷಣ್ಮುಖಪ್ಪ ಉಪಸ್ಥಿತರಿದ್ದರು.

ದತ್ತಿ ಕಾರ್ಯಕ್ರಮದಲ್ಲಿ ಈಚೆಗೆ ನಿಧನರಾದ ದತ್ತಿ ದಾನಿಗಳು ಹಾಗೂ ಮೊದಲನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ನಿವೃತ್ತ ಪ್ರೊ.ಬಸವನಗೌಡ್ರು ಅವರಿಗೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

Share

Leave a comment

Leave a Reply

Your email address will not be published. Required fields are marked *

Related Articles
Homeಪ್ರಮುಖ ಸುದ್ದಿ

ಆರ್ ಸಿಬಿ(RCB) ಗೆಲುವು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಶಿಕಾರಿಪುರ ಲೈವ್: ಐಪಿಎಲ್ ಪಂದ್ಯಾವಳಿಯಲ್ಲಿ “ಆರ್‌ಸಿಬಿ” ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ...

ಪ್ರಮುಖ ಸುದ್ದಿ

ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಂಸದ ಬಿ.ವೈ.‌ರಾಘವೇಂದ್ರ

ಶಿಕಾರಿಪುರ ಲೈವ್ : ಆಪರೇಷನ್ ಸಿಂಧೂರದ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು...

ಪ್ರಮುಖ ಸುದ್ದಿ

ಶಿಕಾರಿಪುರ: ಪುರಸಭೆ 39.17ಲಕ್ಷ ಉಳಿತಾಯ ಬಜೆಟ್‌ ಮಂಡನೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ಬಜೆಟ್‌ ಸಭೆಯಲ್ಲಿ 39.17ಲಕ್ಷ...

Homeಪ್ರಮುಖ ಸುದ್ದಿ

ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಸುನಂದಾ ಮಂಜುನಾಥ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಸುನಂದಾ ಮಂಜುನಾಥ್ ಬಾಳೆಕಾಯಿ ಅವರು ಶುಕ್ರವಾರ...