ಶಿಕಾರಿಪುರ ಲೈವ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆ ಪಕ್ಕದ ತಡೆಗೊಡೆಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಶಿಕಾರಿಪುರ ತಾಲ್ಲೂಕಿನ ಹುಲುಗಿನಕಟ್ಟೆ ಗ್ರಾಮದ ಕೆರೆ ಸಮೀಪ ಈ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ದಾವಣಗೆರೆ ನಗರದ ಕಲೀಂವುಲ್ಲಾ(56) ಎಂದು ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ಬರ್ಕತ್(50) ಅವರಿಗೆ ತೀವ್ರ ರೀತಿಯ ಗಾಯಗಳಾಗಿದ್ದು ಶಿಕಾರಿಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
Leave a comment