Home ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪೌರಸೇವಾ ನೌಕರರ ಪ್ರತಿಭಟನಾ ಧರಣಿ
Home

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪೌರಸೇವಾ ನೌಕರರ ಪ್ರತಿಭಟನಾ ಧರಣಿ

Share
Share

ಶಿಕಾರಿಪುರ ಲೈವ್:
ಸರ್ಕಾರ ಪೌರಸೇವಾ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ ಪೌರಸೇವಾ ನೌಕರರು
ಪುರಸಭೆ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನಾ ಧರಣಿ ನಡೆಸಿ ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಬಾಳೆಕಾಯಿ ಹಾಗೂ ಮುಖ್ಯಾಧಿಕಾರಿ ಭರತ್ ಅವರಿಗೆ ಮನವಿ ಸಲ್ಲಿಸಿದರು.‌

ಈ ಸಂದರ್ಭದಲ್ಲಿ ಮಾತನಾಡಿದ ಪೌರಸೇವಾ ನೌಕರರು, ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ / ಕ್ಷೇಮಾಭಿವುಧಿ ಅದಿನಿಯಮದಡಿ ಇರುವ ನೌಕರರನ್ನು ಸಕ್ರಮಾತಿಗೊಳಿಸಬೇಕು. ನಗರ ಸಭೆಗಳಲ್ಲಿ ಶೇ100% ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ಮಾಡಬೇಕು. 2022ನೇ ಸಾಲಿನ ವಿಶೇಷ ನೇಮಕಾತಿ ಅಡಿ ಆಯ್ಕೆಯಾದ ಪೌರಕಾರ್ಮಿಕರು/ಲೋಡರ್ಸ್ ಗಳಿಗೆ ಎಸ್ ಎಫ್ ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರುಗಳನ್ನು ವಿಶೇಷ ನೇಮಕಾತಿಯಡಿ ಪರಿಗಣಿಸಬೇಕು. ಪೌರ ಸೇವಾನೌಕರರಿಗೆ ಜ್ಯೋತಿ ಸಂಜೀವಿನಿ /ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಬೇಕು. ಐಟಿ ಸಿಬ್ಬಂದಿ,ಅಕೌಂಟ್ ಕನ್ಸಲೆಂಟ್, ಕಂಪ್ಯೂಟರ್ ಆಪರೇಟರ್ ,ವಾಹನ ಚಾಲಕ, ಸ್ಯಾನಿಟರಿ ಸೂಪರಿ ವೈಸರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವ ನೌಕರರೆಂದು ಪರಿಗಣಿಸಿ ವೀಲಿನಗೊಳಿಸಬೇಕು. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಧರಣಿ ಮುಂದುವರೆಯುತ್ತದೆ ಎಂದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ. ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಪ್ರಸಾದ್, ನೌಕರರಾದ ಸುರೇಶ್, ಪರಶುರಾಮ್, ಪೌರಸೇವಾ ನೌಕರರ ಸೇವಾ ಸಂಘದ ಉಪಾಧ್ಯಕ್ಷ ಬಿ. ಶ್ರೀನಿವಾಸ, ಖಜಾಂಚಿ ಕೆ.ಎನ್. ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಸೈಯದ್ ನವಾಜ್, ಕಾನೂನು ಸಲಹೆಗಾರರು ಎಂ.ಎಚ್. ರಾಜ್‌ಕುಮಾರ್, ವಿ.ಎಸ್. ಸುರೇಶ್, ಶಾಖಾ ನಿರ್ದೇಶಕರು ಎಂ. ರವಿಕುಮಾರ್, ಚೌಡಯ್ಯ, ವಿನೋದ್ ಕುಮಾರ್, ಸಿದ್ದಪ್ಪ, ರಘು,
ಚಿನ್ನಕ್ಕ, ರವಣಮ್ಮ, ಜಿಲ್ಲಾ ನಿರ್ದೇಶಕರಾದ ಬಿ.ಎಂ. ರಾಘವೇಂದ್ರ, ಸಿ. ರಂಗನಾಥ, ನೌಕರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...