ಶಿಕಾರಿಪುರ ಲೈವ್:
ಐಪಿಎಲ್ ಪಂದ್ಯಾವಳಿಯಲ್ಲಿ “ಆರ್ಸಿಬಿ” ತಂಡ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಅಭಿಮಾನಿಗಳು ಪಟಾಕಿ ಸಿಡಿಸಿ ಹಾಗೂ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಪಟ್ಟಣದ ಪ್ರಮುಖ ಸರ್ಕಲ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಮಾಯಿಸಿದ ಯುವಕರ ಗುಂಪು ಆರ್ ಸಿ ಬಿ ಪರ ಜಯಘೋಷ ಕೂಗುತ್ತಾ ಸಂಭ್ರಮಿಸಿತು. ಸ್ನೇಹಿತರೊಂದಿಗೆ ಕುಣಿದು ಕುಪ್ಪಳಿಸಿದರು.
Leave a comment