ಶಿಕಾರಿಪುರ ಲೈವ್:
ಪರಿಸರ ಪ್ರೇಮ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಬಾಳೆಕಾಯಿ ಸಲಹೆ ನೀಡಿದರು.
ಪಟ್ಟಣದ ಕನಕ ಪಾರ್ಕ್ ನಲ್ಲಿ ಪುರಸಭೆ ಮತ್ತು ಕೇಂದ್ರ ಸರ್ಕಾರದ ಅಮೃತ 2.0 ಯೋಜನೆ ಅಡಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆದ “ಮಾತೆಗೊಂದು ಮರ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಉತ್ತಮ ಆರೋಗ್ಯಕ್ಕಾಗಿ ಪರಿಸರವನ್ನು ಸ್ವಚ್ಛವಾಗಿಡಬೇಕು. ಮಾಲಿನ್ಯ ತಡೆಗಟ್ಟಬೇಕು. ಪರಿಸರದ ಸಮತೋಲನವನ್ನು ಕಾಪಾಡಬೇಕು. ನಮ್ಮ ಸುತ್ತಮುತ್ತಲಿರುವ ಪ್ರದೇಶದಲ್ಲಿ ಗಿಡಮರಗಳನ್ನು ನೆಟ್ಟು ಪೋಷಿಸಬೇಕು. ಪ್ರಕೃತಿಯನ್ನು ರಕ್ಷಿಸುವುದು, ಮಾಲಿನ್ಯವನ್ನು ಕಡಿಮೆ ಮಾಡುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಕಡೆಗೆ ಅರ್ಥಪೂರ್ಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಪುರಸಭೆಯೊಂದಿಗೆ ನಾಗರೀಕರು ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಪುರಸಭೆ ಉಪಾಧ್ಯಕ್ಷೆ ರೂಪ ಮಂಜುನಾಥ್ ಪಾರಿವಾಳ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೇಲ್ಲರ ಜವಾಬ್ದಾರಿಯಾಗಿದೆ. ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು. ಮರುಬಳಕೆಯ ಕಾರ್ಯಕ್ರಮಗಳ ಮೂಲಕ,ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ , ಮುಖ್ಯಾಧಿಕಾರಿ ಭರತ್, ಸಮುದಾಯ ಸಂಘಟನಾಧಿಕಾರಿ ಸುರೇಶ್, ವ್ಯವಸ್ಥಾಪಕ ರಾಜಕುಮಾರ್, ಆರೋಗ್ಯ ನಿರೀಕ್ಷಕ ಸೈಯದ್ ನವಾಜ್, ಆರ್.ಒ. ಪರಶುರಾಮಪ್ಪ, ಅರಣ್ಯ ಇಲಾಖೆ ಅಧಿಕಾರಿ ಪ್ರಮೋದ್, ಸಿಬ್ಬಂದಿ ಪ್ರಿಯಾಂಕ, ಯಶೋಧ, ದೇವರಾಜ, ಮಹಿಳಾ ಪ್ರತಿನಿಧಿಗಳು, ಸಿಬ್ಬಂದಿ ಉಪಸ್ಥಿತರಿದ್ದರು
Leave a comment