ಶಿಕಾರಿಪುರ ಲೈವ್:
ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರ ಹಾಗೂ ರೈತರ ಪರ ಆಡಳಿತ ನಡೆಸದೇ ಬಂಡವಾಳ ಶಾಹಿಗಳ ಪರ ಆಡಳಿತ ನಡೆಸುತ್ತಿದ್ದಾರೆ. ಮೋದಿ ಅವರು ಹೇಳಿದ ಅಚ್ಚೆ ದಿನ್ ಬಡವರಿಗೆ ಬಂದಿಲ್ಲ. ಶ್ರೀಮಂತರಿಗೆ ಮಾತ್ರ ಅಚ್ಚೆ ದಿನ್ ಬಂದಿದೆ. ಮೋದಿ ಸರ್ಕಾರ ರಸಗೊಬ್ಬರ ಬೆಲೆಯನ್ನು 200 ರಿಂದ 500 ರೂಪಾಯಿವರೆಗೆ ಏರಿಕೆ ಮಾಡುವ ಮೂಲಕ ರೈತರ ಮೇಲೆ ಗದಪ್ರಹಾರ ಮಾಡಿದೆ. ಗೊಬ್ಬರ ಬೆಲೆ ಏರಿಕೆ ಮಾಡಿರುವುದನ್ನು ಯುವ ಕಾಂಗ್ರೆಸ್ ಖಂಡಿಸುತ್ತದೆ. ಅತಿವೃಷ್ಟಿ,ಅನಾವೃಷ್ಟಿಯಿಂದ ಕಂಗೆಟ್ಟ ದೇಶದ ರೈತರಿಗೆ ಮೋದಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡುವ ಮೂಲಕ ರೈತರ ಗಾಯದ ಮೇಲೆ ಬರೆ ಎಳೆದಿದೆ. ಕೇಂದ್ರ ಸರ್ಕಾರ ರೈತರ ಹಿತ ದೃಷ್ಟಿಯಿಂದ ಗೊಬ್ಬರ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಕಡಿಮೆ ಮಾಡಬೇಕು ಎಂದು ತಹಶೀಲ್ದಾರ್ ಮಲ್ಲೇಶಪ್ಪ ಬಿ.ಪೂಜಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
“ಕಾಡಾ” ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಭಂಡಾರಿ ಮಾಲತೇಶ್,
ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ, ಯುವಕಾಂಗ್ರೆಸ್ ಅಧ್ಯಕ್ಷ ಎಸ್. ಮಂಜುನಾಯ್ಕ್, ಯುವಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಸಂದಿಮನಿ ಶಿವಶಂಕರ್,
ಉಪಾಧ್ಯಕ್ಷರಾದ ಚರಣ್ ಬನ್ನೂರು, ಆದರ್ಶ,
ಪ್ರಧಾನ ಕಾರ್ಯದರ್ಶಿ ಗೋಪಿ ಕೃಷ್ಣ,ಮಹಮ್ಮದ್ ಜಮೀರ್, ಕಾರ್ಮಿಕ ಘಟಕದ ಅಧ್ಯಕ್ಷ ಸುನೀಲ್ ಬನ್ನೂರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
Leave a comment