Home ದೇಶದ ಬಲಿಷ್ಠ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ: ಸಂಸದ ಬಿ.ವೈ. ರಾಘವೇಂದ್ರ ಬಣ್ಣನೆ
Home

ದೇಶದ ಬಲಿಷ್ಠ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ: ಸಂಸದ ಬಿ.ವೈ. ರಾಘವೇಂದ್ರ ಬಣ್ಣನೆ

Share
Share

ಶಿಕಾರಿಪುರ ಲೈವ್:
ದೇಶದ ಬಲಿಷ್ಠ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಬಣ್ಣಿಸಿದರು.

ತಾಲ್ಲೂಕಿನ‌ ಅಂಬಾರಗೊಪ್ಪ ಗ್ರಾಮದಲ್ಲಿ ಮಂಗಳವಾರ ಕಪ್ಪನಹಳ್ಳಿ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಶಕ್ತಿಯುತ ಪ್ರಧಾನಿಯಾಗಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯತೆಯ ಆಧಾರದ ಮೇಲೆ ಸ್ಥಾಪಿತವಾದ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ರಕ್ಷಣೆ ಮಾಡುತ್ತಿದ್ದಾರೆ. ದೇಶದ ಹಿತಕ್ಕಾಗಿ ಆಡಳಿತ ನಡೆಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ,ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ದೇಶ ವಿಕಸಿತ ಭಾರತವಾಗುತ್ತಿದೆ ಎಂದು ಶ್ಲಾಘಿಸಿದರು.

ಸಂವಿಧಾನದ ಪೀಠಿಕೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಸಂವಿಧಾನ ರಚನೆ ಮಾಡಿದ ಡಾ.ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದರು. ಅವರ ಮೃತದೇಹವನ್ನು ದೆಹಲಿಯಲ್ಲಿ ಅಂತ್ಯಸಂಸ್ಕಾರ ಭೂಮಿಯನ್ನು ನೀಡಲಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ನೀಡಿದೆ. ಅಂಬೇಡ್ಕರ್ ಸಮಾಧಿ,ಲಂಡನ್ನಿನಲ್ಲಿ ಅವರು ವಿದ್ಯಾಭ್ಯಾಸ ಪಡೆದ ಕಾಲೇಜಿನ ಕಟ್ಟಡದ ಅಭಿವೃದ್ಧಿಗೆ ಮುಂದಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರ ಮನಸ್ಸು ಮುಟ್ಟುವಂತೆ ತಿಳಿಸುವ ಮೂಲಕ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮಾತನಾಡಿ, ಬಿಜೆಪಿ ರಾಷ್ಟ್ರೀಯತೆ ಹಾಗೂ ಹಿಂದುತ್ವ ಸಿದ್ದಾಂತದ ಆಧಾರದ ಮೇಲೆ ಸ್ಥಾಪಿತವಾದ ಪಕ್ಷವಾಗಿದೆ. ಬಿಜೆಪಿ‌ ಮುಖಂಡರು ಹಾಗೂ ಕಾರ್ಯಕರ್ತರು ದೇಶವೇ ಮೊದಲು ಎಂಬ ಸಂಕಲ್ಪವನ್ನು ಹೊಂದಬೇಕು. ರಾಷ್ಟ್ರೀಯ ಪಕ್ಷದ ಕಾರ್ಯಕರ್ತರಾಗಿ ಜವಾಬ್ದಾರಿಯುತವಾಗಿ ಪಕ್ಷ ಸಂಘಟನೆ ಮಾಡಲು ಮುಂದಾಗಬೇಕು ಸಲಹೆ ನೀಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ,
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿದೇವಿ, ಪ್ರಧಾನ ಕಾರ್ಯದರ್ಶಿ ಮಂಗಳ, ರೈತ ಮೋರ್ಚಾ ಅಧ್ಯಕ್ಷ ನಿಂಬೆಗೊಂದಿ ಸಿದ್ದಲಿಂಗಪ್ಪ,
ಮುಖಂಡರಾದ ಟಿ. ರಾಮನಾಯ್ಕ, ಶೇಖರಪ್ಪ, ಕೆ.ಜಿ.‌ ವಸಂತಗೌಡ್ರು, ಹುಲ್ಮಾರ್ ಮಹೇಶ್, ಎಂ.ಬಿ. ಚನ್ನವೀರಪ್ಪ, ಮಲ್ಲೇಶಪ್ಪ, ಬಸವನಗೌಡ್ರು, ಸೈನಿಕ ಬಸವರಾಜ್, ಸಿದ್ರಾಮಣ್ಣ, ನಾಗಪ್ಪ, ಶಿವಮೂರ್ತಿ, ಕೆ.ಪಿ. ರುದ್ರಪ್ಪ, ವಿಜಯನಾಯ್ಕ, ವೀರನಗೌಡ, ಶಾಂತಪ್ಪ, ಮಾಜಿ , ಬಂಗಾರಿನಾಯ್ಕ, ಎ.ಬಿ. ಸುಧೀರ್,  ವಿನಯ್, ಅನೂಪ್, ನಾಗೀಹಳ್ಳಿ ಗಣೇಶ್, ರೇವಣಸಿದ್ದಪ್ಪ, ಹಳ್ಳೆಣ್ಣೆ ಗಿರೀಶ್, ಲೋಹಿತನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...