ಶಿಕಾರಿಪುರ ಲೈವ್:
ತಾಲ್ಲೂಕಿನ ಸರ್ವಾಂಗೀಣಾ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರ ಸಮೀಪ ಮಂಗಳವಾರ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿಅವರು ಮಾತನಾಡಿದರು.
ಪಟ್ಟಣ ವ್ಯಾಪ್ತಿ ಹೆಚ್ಚಾಗಿರುವುದರಿಂದ ಈ ಬಡಾವಣೆಗಳ ಜನರ ಅನುಕೂಲಕ್ಕಾಗಿ ಐದು ಲಕ್ಷ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು ಆರೂವರೆ ಕೀ. ಮೀ. ವ್ಯಾಪ್ತಿಯಲ್ಲಿ ಮನೆಗಳಿಗೆ ಪೈಪ್ ಲೈನ್ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಚ್ಛಾಶಕ್ತಿಯಿಂದ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣ ಜನತೆಗೆ ಅಂಜನಾಪುರ ಜಲಾಶಯದಿಂದ ಕುಡಿಯುವ ನೀರನ್ನು ತರಲಾಗಿದೆ ಎಂದು ಶ್ಲಾಘಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ಉಪಾಧ್ಯಕ್ಷೆ ರೂಪಾ ಮಂಜುನಾಥ್, ಸದಸ್ಯರಾದ ರೂಪಾಕಲಾ ಎಸ್. ಹೆಗಡೆ, ರೇಖಾಬಾಯಿ ಮಂಜುನಾಥ್ ಸಿಂಗ್, ಭದ್ರಾಪುರ ಫಾಲಾಕ್ಷ, ಗೋಣಿ ಪ್ರಕಾಶ್, ಜೀನಳ್ಳಿ ಪ್ರಶಾಂತ್, ಉಮಾವತಿ, ರೇಣುಕಾಸ್ವಾಮಿ, ರೋಷನ್ ಮುಖ್ಯಾಧಿಕಾರಿ ಭರತ್ ಮತ್ತಿತರರು ಉಪಸ್ಥಿತರಿದ್ದರು.
Leave a comment