Home ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಿ: ಡಾ.ಕಿರಣ್ ಕುಮಾರ್ ಹರ್ತಿ ಸಲಹೆ
Home

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಿ: ಡಾ.ಕಿರಣ್ ಕುಮಾರ್ ಹರ್ತಿ ಸಲಹೆ

Share
Share

ಶಿಕಾರಿಪುರ ಲೈವ್:
ತಾಲೂಕಿನ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಬೇಕು ಎಂದು ಕೃಷಿ‌ ಇಲಾಖೆ ಸಹಾಯಕ ನಿರ್ದೇಶಕ ಡಾ.ಕಿರಣ್ ಕುಮಾರ್ ಹರ್ತಿ ರೈತರಿಗೆ ಸಲಹೆ ನೀಡಿದ್ದಾರೆ.

ಶಿಕಾರಿಪುರ ತಾಲ್ಲೂಕಿನಾದ್ಯಾಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಲಿದೆ. ಜುಲೈ ಮಾಹೆಯಲ್ಲಿ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆಗೆ 197.4ಮಿಮಿ ಗೆ 178.2ಮಿಮಿ ( ಶೇ.10ರಷ್ಟು ಕಡಿಮೆ ಮಳೆ), ಅಂಜನಾಪುರ ಹೋಬಳಿ ವಾಡಿಕೆ ಮಳೆ 245.8ಮಿಮಿ ಗೆ 189.1ಮಿಮಿ ( ಶೇ.23 ರಷ್ಟು ಕಡಿಮೆ ಮಳೆ), ಹೊಸೂರು ಹೋಬಳಿ ವಾಡಿಕೆ ಮಳೆ 152.4ಮಿಮಿ ಮಳೆಗೆ 102.7ಮಿಮಿ ( ಶೇ.33 ರಷ್ಟು ಕಡಿಮೆ ಮಳೆ), ಉಡುಗಣಿ ಹೋಬಳಿ ವಾಡಿಕೆ ಮಳೆ 233.0ಮಿಮಿ ಗೆ 162.3ಮಿಮಿ ( ಶೇ.30ರಷ್ಟು ಕಡಿಮೆ ಮಳೆ ) ಮತ್ತು ತಾಳಗುಂದ ಹೋಬಳಿ ವಾಡಿಕೆ ಮಳೆ 234.4ಮಿಮಿ ಗೆ 149.3ಮಿಮಿ ( ಶೇ.36ರಷ್ಟು ಕಡಿಮೆ ಮಳೆ ) ಬಿದ್ದಿರುತ್ತದೆ.

ಈ ಬಾರಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆ ಆಗಿದ್ದರೂ ಸಹ ಸತತವಾಗಿ ಪ್ರತಿದಿನ ಮಳೆ ಆಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಾದ ಯೂರಿಯಾ ಮೇಲು ಗೊಬ್ಬರ ನೀಡುವುದು, ಎಡೆ ಕುಂಟೆ ಹೊಡೆಯುವುದು, ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ತುಂಬಾ ತೊಂದರೆ ಉಂಟಾಗಿರುತ್ತದೆ. ಈ ನಿಟ್ಟಿನಲ್ಲಿ ರೈತರು ಶಿಫಾರಸ್ಸಿಗಿಂತ ಅತೀ ಹೆಚ್ಚು ಯೂರಿಯಾ ರಸಗೊಬ್ಬರವನ್ನು ಮಳೆಯಲ್ಲಿಯೇ ಅಥವಾ ಕೊಂಚ ಮಳೆ ಕಡಿಮೆಯಾದಾಗ ಕೊಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಂತದಲ್ಲಿ ಸಾರಜನಕ ಕೊರತೆ ಕಂಡುಬಂದರೂ ಸಹ ಯೂರಿಯಾ ರಸಗೊಬ್ಬರವನ್ನು ಸರಿಯಾಗಿ ಮಣ್ಣಿನಲ್ಲಿ ಸೇರಿಸಲು ಸಾಧ್ಯವಿರದ ಕಾರಣ ಬೆಳೆಗಳು ಶೀತದಿಂದ ಬೇರುಗಳ ಬೆಳವಣಿಗೆ ಕುಂಠಿತವಾಗಿ ಗಿಡಗಳ ಬೆಳವಣಿಗೆಯೂ ಸಹ ಕುಂಠಿತವಾಗಿ ಇಳುವರಿ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ.

ಆದ್ದರಿಂದ ರೈತರು 4 ರಿಂದ 5 ತಾಸು ಮಳೆ ಕಡಿಮೆ ಆದಾಗ ಯೂರಿಯಾ ರಸಗೊಬ್ಬರವನ್ನು ಕೊಡುವ ಬದಲಾಗಿ ನ್ಯಾನೋ ಯೂರಿಯಾ (ಶೇ.20 ಸಾರಜನಕ )-500ಮಿಲಿ ಬಾಟಲಿನಲ್ಲಿ ಲಭ್ಯವಿದ್ದು ( ರೂ.225 ದರ ) ಅಥವಾ ನ್ಯಾನೋ ಡಿಎಪಿ ( ಶೇ.8 ಸಾರಜನಕ ಮತ್ತು ಶೇ.16 ರಂಜಕ)-500ಮಿಲಿ ಬಾಟಲಿನಲ್ಲಿ ಲಭ್ಯವಿರುವ ( ದರ ರೂ.600) ದ್ರವ ರೂಪದ ಸಾರಜನಕವನ್ನು ಪ್ರತಿ ಲೀಟರ್‌ ನೀರಿಗೆ 3 ರಿಂದ 5ಮಿಲಿ ಬೆರೆಸಿ ಸಿಂಪಡಿಸಲು ಕೋರಿದೆ.. ಈ ದ್ರವ ಗೊಬ್ಬರವನ್ನು 30- 35 ದಿನಗಳು ಮೊದಲನೇ ಹಂತ ಮತ್ತು 50-60ದಿನಗಳಲ್ಲಿ ಸಿಂಪಡಿಸುವುದರಿಂದ ಪೋಷಕಾಂಶಗಳ ಸದ್ಬಳಕೆಯಾಗಿ ಉತ್ತಮ ಬೆಳೆ ಬೆಳವಣಿಗೆ ಮತ್ತು ಉತ್ತಮ ಇಳುವರಿ ಸಾಧ್ಯವಾಗುತ್ತದೆ. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ಅಧಿಕ ಹರಡುವಿಕೆ ಸಾಮರ್ಥೈ ಹೊಂದಿರುವುದರಿಂದ ಇವುಗಳನ್ನು ಇತರೆ ಕೀಟನಾಶಕ, ಶಿಲಿಂಧ್ರನಾಶಕ ಮತ್ತು ನೀರಿನಲ್ಲಿ ಕರಗುವ ರಸಗೊಬ್ಬರಗಳೊಂದಿಗೆ ಸೇರಿಸಿ ಸಿಂಪಡಣೆ ಮಾಡಬಹುದಾಗಿದೆ. ಮೇಲು ಗೊಬ್ಬರವಾಗಿ ಬಳಸುವ ಯೂರಿಯಾ ಚೀಲವನ್ನು ಶೇ.50ರಷ್ಟು ಕಡಿಮೆ ಮಾಡಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...