ಶಿಕಾರಿಪುರ ಲೈವ್:
ತಾಲ್ಲೂಕಿನ ರೈತರ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಬುಧವಾರ ಸಂಪೂರ್ಣ ಭರ್ತಿಯಾಗಿದ್ದು,ಕೋಡಿ ಮೇಲೆ ನೀರು ಹರಿದ ದೃಶ್ಯ ಕಂಡು ಬಂದಿದೆ.
ಶಿಕಾರಿಪುರ ತಾಲ್ಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಅಂಜನಾಪುರ ಜಲಾಶಯಕ್ಕೆ ನೀರು ಹರಿದು ಬಂದಿದ್ದು,ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಅಂಜನಾಪುರ ಜಲಾಶಯ ಸುಮಾರು 21ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಈ ಜಲಾಶಯದಿಂದ ಶಿಕಾರಿಪುರ ಪಟ್ಟಣ ಹಾಗೂ ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲಾಗುತ್ತದೆ. ತಾಲ್ಲೂಕಿನಲ್ಲಿ ಭತ್ತ ಬೆಳೆಯುವ ರೈತರು ಈ ಜಲಾಶಯ ನೀರನ್ನು ನಂಬಿಕೊಂಡಿದ್ದಾರೆ.
ಪ್ರಸ್ತುತ ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿ ಮೇಲೆ ನೀರು ಹರಿಯುತ್ತಿರುವುದರಿಂದ ಅಂಜನಾಪುರ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಭತ್ತ ನಾಟಿ ಕಾರ್ಯ ನಡೆಸಲು ರೈತರು ಸಿದ್ಧತೆ ಮಾಡಿಕೊಳ್ಳಲಿದ್ದಾರೆ.
Leave a comment