ಶಿಕಾರಿಪುರ ಲೈವ್(ಶಿರಾಳಕೊಪ್ಪ) :
ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸಮೀಪದ ತಾಳಗುಂದ. ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಯಾವುದೋ ಕುಣಿಕೆಯು ಚಿರತೆಯ ಕೊರಳಿಗೆ ಸಿಕ್ಕಿಹಾಕಿಕೊಂಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಚಿರತೆ ಕುಣಿಕೆಗೆ ಬಿದ್ದು ಮೃತಪಟ್ಟಿದೆ.

ಕಳೆದ ಎರಡು ಮೂರು ದಿನಗಳ ಹಿಂದೆಯೇ ಚಿರತೆ ಸಾವನ್ನಪ್ಪಿರುವ ಸಾಧ್ಯತೆಯಿದ್ದು,ದೇಹದಿಂದ ದುರ್ವಾಸನೆ ತೀವ್ರವಾಗಿ ಹರಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಚಿರತೆ ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು, ಪಶುವೈದ್ಯಾಧಿಕಾರಿಗಳಿಂದ ,ಮೃತ ಚಿರತೆಯ
ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಲಾಗುವುದು ಎಂದು ಶಿರಾಳಕೊಪ್ಪ ವಲಯ ಅರಣ್ಯಾಧಿಕಾರಿ ಜಾವೀದ್ ತಿಳಿಸಿದ್ದಾರೆ.
Leave a comment