Home ಕ್ರೈಮ್ ಡೈರಿ ಹುಚ್ಚರಾಯಸ್ವಾಮಿ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ
ಕ್ರೈಮ್ ಡೈರಿ

ಹುಚ್ಚರಾಯಸ್ವಾಮಿ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Share
Share

ಶಿಕಾರಿಪುರ ಲೈವ್:
ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ ಪಟ್ಟಣದ ನಿವಾಸಿ ನಮಿತಾ(21)(ರಮ್ಯ) ಎಂದು ತಿಳಿದು ಬಂದಿದೆ. ಬೆಳಿಗ್ಗೆ ಹುಚ್ಚರಾಯಸ್ವಾಮಿ ದೇವಸ್ಥಾನ ಮುಂಭಾಗ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ,ನಂತರ ಕೆರೆ ತುಂಬಿನ ಮೇಲೆ ಚಪ್ಪಲಿ ಬಿಟ್ಟು ಕೆರೆ ಹಾರಿದ್ದಾಳೆ. ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರ ಸಹಕಾರದಿಂದ ಯುವತಿ ಮೃತ ದೇಹವನ್ನು ಕೆರೆಯಿಂದ ಹೊರತೆಗೆಯಲಾಯಿತು. ಯುವತಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಬೆಳಿಗ್ಗೆ ಕಾಲೇಜಿಗೂ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದಳು.

ನಿನ್ನೆ ಪ್ರಕಟವಾದ ಸೆಮಿಷ್ಟರ್ ಪರೀಕ್ಷೆ ಫಲಿತಾಂಶದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಕಾಲೇಜಿನ ಬ್ಯಾಗ್ ನಲ್ಲಿ ಡೆತ್ ನೋಟ್ ಬರೆದಿದ್ದಳು ಎಂದು ಸಂಬಂಧಿಕರು ಪಟ್ಟಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *