ಶಿಕಾರಿಪುರ ಲೈವ್:
ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಗ್ರೇಡ್2 ತಹಸಿಲ್ದಾರ್ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ
ಕೆ.ಎಸ್. ಗುರುಮೂರ್ತಿ, ಬಿಜೆಪಿ ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಿದ್ದರು. ಆದರೆ ಇಂದು ಕಾಂಗ್ರೆಸ್ ನಾಯಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರ ಓಲೈಕೆಗಾಗಿ ಹಾಗೂ ಅವರಿಗೆ ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ. ಸಂವಿಧಾನ ವಿರುದ್ಧ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್ ತಮ್ಮ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಧರ್ಮಧಾರಿತ ಹಾಗೂ ಜಾತಿ ಆಧಾರಿತ ರಾಜಕಾರಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮಾಡುತ್ತಿದೆ. ಅಭಿವೃದ್ಧಿ ಕಾಮಗಾರಿಯ ಗುತ್ತಿಗೆಯನ್ನು ಜಾತಿ ಹಾಗೂ ಧರ್ಮದ ಆಧಾರದ ಮೇಲೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಹಿಂದೂ ವಿರೋಧಿ ಆಡಳಿತವನ್ನು ಕಾಂಗ್ರೆಸ್ ನಡೆಸುತ್ತಿದೆ. ವೋಟ್ ಬ್ಯಾಂಕ್ ಗಾಗಿ ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡ, ಸದಸ್ಯ ಡಿ.ಆರ್. ರಾಘವೇಂದ್ರ ಬಿಜೆಪಿ ಕಾರ್ಯದರ್ಶಿ ಮಾರವಳ್ಳಿ ಅಶೋಕ್, ಜೆಡಿಎಸ್ ತಾಲೂಕು ಅಧ್ಯಕ್ಷ ಬೆಂಕಿ ಯೋಗೀಶ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ಕಾರ್ಯದರ್ಶಿ ಲೋಹಿತನಾಯ್ಕ, ನಗರ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಸಾಳಂಕೆ, ಮುಖಂಡರಾದ ಮಂಜುಸಿಂಗ್, ಆರ್.ಕೆ.ಶಂಭು, ಮಹಾಲಿಂಗಪ್ಪ, ನಾಗೀಹಳ್ಳಿ ಗಣೇಶ್, ಮಂಜುನಾಥ ಪಾರಿವಾಳ, ಬಾಳೆಕಾಯಿ ಮಂಜು, ಬಗನಕಟ್ಟೆ ಲೋಕೇಶ್, ಆರ್.ಜಯಣ್ಣ, ಹೂವಿನ ಮಂಡಿ ಸುರೇಶ್, ಮಲ್ಲೇಶಪ್ಪ, ಗುರುರಾಜ್, ಚಂದ್ರು, ಬೋಗಿ ಮಧು ಮತ್ತಿತರರು ಉಪಸ್ಥಿತರಿದ್ದರು.
Leave a comment