ಶಿಕಾರಿಪುರ ಲೈವ್:
ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಯುವ ಸಮುದಾಯ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.
ಪಟ್ಟಣದ ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಸ್ವತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ನಾವು ಸ್ಮರಿಸಬೇಕು. ಯಾವುದೇ ಭೇದವಿಲ್ಲದೇ ಎಲ್ಲರೂ ಒಗ್ಗಟ್ಟಾಗಿ ದೇಶಕ್ಕಾಗಿ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ಗಮನ ನೀಡಬೇಕು. ಪಹಲ್ಗಾಂಗೆ ಪ್ರವಾಸಕ್ಕೆ ತೆರಳಿದ್ದ 26 ಪ್ರವಾಸಿಗರನ್ನು ಧರ್ಮ ಕೇಳಿ ಉಗ್ರರು ಹೆಂಡತಿ,ಮಕ್ಕಳ ಎದುರೇ ಹತ್ಯೆ ಮಾಡಿದ್ದನ್ನು ಇಡೀ ದೇಶವೇ ಖಂಡಿಸಿದೆ. ಆಪರೇಷನ್ ಸಿಂಧೂರದ ಮೂಲಕ ಉಗ್ರರಿಗೆ ಪ್ರಧಾನಿ ನರೇಂದ್ರಮೋದಿ ತಕ್ಕ ಪಾಠ ಕಲಿಸಿದ್ದಾರೆ. ದೇಶದ ರಕ್ಷಣೆಗೆ ಅದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಸ್ವಾತಂತ್ರ್ಯ ಚಳುವಳಿಯಲ್ಲಿ ತಾಲೂಕಿನ ಈಸೂರು ಗ್ರಾಮದ ಹೋರಾಟಗಾರರು ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ವಾತಂತ್ಯ ಚಳುವಳಿಯಲ್ಲಿ ಐದು ಮಂದಿ ಹುತಾತ್ಮರಾಗಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುತಾತ್ಮ ಹೋರಾಟಗಾರರ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ಅನುದಾನ ನೀಡಿದ್ದಾರೆ. ತಾಲೂಕಿನ ರೈತರು ನೆಮ್ಮದಿಯಿಂದ ಜೀವನ ಮಾಡಲು ಅಗತ್ಯವಾದ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಪ್ರಭಾರ ತಹಶೀಲ್ದಾರ್ ಮಂಜುಳಾ ಧ್ವಜಾರೋಹಣ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸ್ವತಂತ್ರ ಹೋರಾಟಗಾರರಾದ ತಿಮ್ಲಾಪುರ ದೇವೇಂದ್ರಪ್ಪ ಅವರನ್ನು ಸಂಸದ ರಾಘವೇಂದ್ರ ಸನ್ಮಾನಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಸುನಂದ ಮಂಜುನಾಥ್ ಬಾಳೆಕಾಯಿ, ಉಪಾಧ್ಯಕ್ಷ ರೂಪಾ ಮಂಜುನಾಥ್ ಪಾರಿವಾಳ, ಸದಸ್ಯರಾದ ಲಕ್ಷ್ಮಿ ಮಹಾಲಿಂಗಪ್ಪ, ರೇಖಾಬಾಯಿ ಮಂಜುನಾಥ್ ಸಿಂಗ್, ಶೈಲಾ ಮಡ್ಡಿ ಯೋಗೀಶ್, ರೂಪಕಲಾ ಹೆಗಡೆ, ಉಮಾವತಿ, ಮುಖ್ಯಾಧಿಕಾರಿ ಭರತ್, ತಾಲೂಕು ಪಂಚಾಯತಿ ಇಒ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ, ಡಿವೈಎಸ್ಪಿ ಕೇಶವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್. ಬಸವರಾಜ್, ಟಿಎಪಿಸಿಎಂಎಸ್ ಅಧ್ಯಕ್ಷ ಎ.ಬಿ. ಸುಧೀರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಡಿ. ಮಧುಕೇಶ್ವರ್, ವಿವಿಧ ಇಲಾಖೆ ಅಧಿಕಾರಿಗಳಾದ ಡಾ.ಕಿರಣ್ ಕುಮಾರ್ ಹರ್ತಿ, ನಾಗೇಶಪ್ಪ, ಮಂಜುನಾಥ್, ಬಾಲರಾಜ್, ರವೀಂದ್ರನಾಯಕ್, ಡಾ.ನವೀದ್ ಖಾನ್, ಮತ್ತಿತರರು ಉಪಸ್ಥಿತರಿದ್ದರು.
Leave a comment