ಶಿಕಾರಿಪುರ ಲೈವ್:
ದೇಶದಲ್ಲಿ ಎಲ್ಲಾ ಜಾತಿಯ ಜನರು ತಾರತಮ್ಯವಿಲ್ಲದೇ ಸಮಾನತೆಯಿಂದ ಜೀವನ ನಡೆಸಲು ಅಗತ್ಯವಾದ ಸಂವಿಧಾನವನ್ನು ಡಾ. ಬಿಆರ್ ಅಂಬೇಡ್ಕರ್ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶ್ಲಾಘಿಸಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ತಾಲೂಕು ಆದಿಜಾಂಭವ(ಮಾದಿಗ)ಸಮಾಜ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು
ದೇಶ ಅಭಿವೃದ್ಧಿಯಾಗಲು ದೇವಸ್ಥಾನದ ಗಂಟೆಗಳಿಗಿಂತ,ಶಾಲೆಗಳ ಗಂಟೆಗಳು ಹೆಚ್ಚು ಒಡೆಯಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಹೇಳಿದ್ದರು. ಅದೇ ರೀತಿ ರಾಜ್ಯ ಸರ್ಕಾರ ಶಾಲೆಗಳ ಗಂಟೆ ಹೆಚ್ಚು ಒಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ಜಾತಿ,ಧರ್ಮ ತೊರೆದು ಒಂದೇ ತಾಯಿ ಮಕ್ಕಳಂತೆ ಬಾಳಲು ಅಗತ್ಯವಾದ ಸಂವಿಧಾನವನ್ನು ಡಾ.ಬಿ.ಆರ್. ಅಂಬೇಡ್ಕರ್ ನೀಡಿದ್ದಾರೆ. ಈ ಸಂವಿಧಾನದ ಪೀಠಿಕೆಯನ್ನು ಶಾಲೆಗಳಲ್ಲಿ ಓದಿಸುವ ಮೂಲಕ ಮಕ್ಕಳಿಗೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.
ನಾನು ನನ್ನ ತಂದೆ,ತಾಯಿ ಹೊರತು ಪಡಿಸಿ ಗೌರವ ನೀಡುವಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ ಆಗಿದ್ದಾರೆ. ನಾವು ಸಚಿವರಾಗಲು ಆಗಲು ಹಾಗೂ ಉನ್ನತ ಮಟ್ಟಕ್ಕೆ ಬೆಳೆಯಲು ಅಂಬೇಡ್ಕರ್ ನೀಡಿದ ಸಂವಿಧಾನ ಸಹಕಾರಿಯಾಗಿದೆ ಅಂಬೇಡ್ಕರ್ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅಗತ್ಯವಾದ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಡಜನರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಸರ್ಕಾರದ ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕರ್ನಾಟಕ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಮಹಾದೇವಪ್ಪ ಉಪನ್ಯಾಸ ನೀಡಿದರು.
ತಾಲ್ಲೂಕು ಆದಿಜಾಂಭವ ಸಮಿತಿ ಅಧ್ಯಕ್ಷ ವಕೀಲ ನಿಂಗಪ್ಪ ಪ್ರಾಸ್ತಾವಿಕ ನುಡಿ ನುಡಿದರು.
ಆದಿಜಾಂಭವ ಸಮಿತಿ ಗೌರವಾಧ್ಯಕ್ಷ ಕೆ. ಹೊಳೆಯಪ್ಪ ಗಾಮ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಿತು.
ಮಾಜಿ ಸಚಿವ ಎಚ್. ಆಂಜನೇಯ, ಮಾಯಕೊಂಡ ಶಾಸಕ ಬಸಂತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಪಿ. ನಾಗರಾಜಗೌಡ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಮ್, ಮುಖಂಡರಾದ ಪುಷ್ಪಾಶಿವಕುಮಾರ್, ಶ್ರೀನಿವಾಸ್ ಕರಿಯಣ್ಣ, ಶಿವ್ಯಾನಾಯ್ಕ, ಭಂಡಾರಿ ಮಾಲತೇಶ್, ಉಳ್ಳಿ ದರ್ಶನ್, ಆದಿಜಾಂಭವ ಸಮಾಜ ಮುಖಂಡರಾದ ಚುರ್ಚಿಗುಂಡಿ ಜಗದೀಶ್, ಅರಳೀಹಳ್ಳಿ ಸುರೇಶ್, ಮುಗಳಗೆರೆ ಬಸವರಾಜ್, ಉಮೇಶ್ ನಳ್ಳಿನಕೊಪ್ಪ, ಎಂಜಿನಿಯರ್ ರಾಮಪ್ಪ, ಕಣಿಯಾ ಮಂಜು, ಹಾಬೆ ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.
Leave a comment