ಶಿಕಾರಿಪುರ ಲೈವ್:
ಸಮಾಜ ಹಾಗೂ ತಂದೆ ತಾಯಿಗೆ ಭಾರವಾಗದಂತಹ ವ್ಯಕ್ತಿಗಳನ್ನು ನಿರ್ಮಾಣ ಮಾಡುವ ಜವಾಬ್ದಾರಿ ತಾಯಂದಿರ ಮೇಲಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಸಲಹೆ ನೀಡಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ದೀನ್ ದಯಾಳ್ ಅಂತ್ಯೋದಯ ಯೋಜನೆಯ ನಗರ ಸ್ವಸಹಾಯ ಸಂಘ ಹಾಗೂ ಒಕ್ಕೂಟ ಆಯೋಜಿಸಿದ್ದ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಸ್ವಸಹಾಯ ಸಂಘಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರ್ಥಿಕ ಶಕ್ತಿಯನ್ನು ವೃದ್ಧಿಸಿಕೊಂಡು ಸ್ವಾಭಿಮಾನದಿಂದ ಜೀವನ ನಡೆಸುತ್ತಿದ್ದಾರೆ. ದೀನ್ ದಯಾಳ್ ಅಂತ್ಯೋದಯ ಯೋಜನೆ ಸ್ವಸಹಾಯ ಸಂಘ ಸೇರಿದಂತೆ ಸರ್ಕಾರದ ವಿವಿಧ ಸ್ವಸಹಾಯ ಸಂಘಗಳ ಮೂಲಕ ನೀಡುವ ಸಹಾಯಧನವನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳನ್ನು ನೀಡಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದರು. ಭಾಗ್ಯಲಕ್ಷ್ಮಿ ಯೋಜನೆ ತಂದ ಪರಿಣಾಮ ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಕಡಿಮೆಯಾಗಿದೆ. ತಾಲೂಕಿಗೆ ಅಗತ್ಯವಾದ ನೀರಾವರಿ ಯೋಜನೆಯನ್ನು ಯಡಿಯೂರಪ್ಪ ಅನುಷ್ಠಾನ ಮಾಡಿದ್ದಾರೆ. ಸಂಸದನಾಗಿ ಮೈಕ್ ನಲ್ಲಿ ಮಾತ್ರ ಟ್ರೈನ್ ಬಿಡದೆ ತಾಲೂಕಿನಲ್ಲಿ ನಿಜವಾಗಿ ಹಳಿಯ ಮೇಲೆ ಟ್ರೈನ್
ಬಿಡುವ ಪ್ರಯತ್ನ ಮಾಡುತ್ತಿದ್ದೇನೆ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಹಾಗೂ ಮಹಿಳಾ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪುರಸಭೆ ಹಿರಿಯ ಮಹಿಳಾ ನೌಕರರಾದ ವೀಣಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಪುರಸಭೆ ಅಧ್ಯಕ್ಷೆ ಶೈಲಾ ಮಡ್ಡಿ ಯೋಗೀಶ್, ಉಪಾಧ್ಯಕ್ಷ ರೂಪ ಮಂಜುನಾಥ್ ಪಾರಿವಾಳ, ಸದಸ್ಯರಾದ ರೂಪಕಲಾ ಎಸ್. ಹೆಗಡೆ, ಲಕ್ಷ್ಮಿ ಮಹಾಲಿಂಗಪ್ಪ,ರೇಖಾಬಾಯಿ ಮಂಜುನಾಥ್ ಸಿಂಗ್, ಸುನಂದಾ ಮಂಜುನಾಥ್ ಶಕುಂತಲಮ್ಮ ಗೋಣಿ ಶಿವಪ್ಪ, ಜೀನಳ್ಳಿ ಪ್ರಶಾಂತ್, ಜಯಶ್ರೀ ಹೇಮರಾಜ್, ಕಮಲಮ್ಮ ಹುಲ್ಮಾರ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಪುರಸಭೆ ಮುಖ್ಯಾಧಿಕಾರಿ ಭರತ್ ಸಮುದಾಯ ಸಂಘಟನಾಧಿಕಾರಿ ಸುರೇಶ್, ವ್ಯವಸ್ಥಾಪಕ ರಾಜಕುಮಾರ್, ಡೇನಾಲ್ ಶಾಖೆಯ ಗೀತಾ, ಪ್ರಿಯಾಂಕ, ಕುಮಾರಿ, ಯಶೋಧ ದೇವರಾಜ್ ಉಪಸ್ಥಿತರಿದ್ದರು.
Leave a comment