ಶಿಕಾರಿಪುರ ಲೈವ್:
ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಶಿರಾಳಕೊಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪ್ರಕರ್ತರ ಸಂಘದ ಅಧ್ಯಕ್ಷ ವೈದ್ಯನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆದ ಶಿಕಾರಿಪುರ ತಾಲೂಕು ಕಾರ್ಯನಿರತ ಸಂಘದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಚುನಾವಣೆ ಪ್ರಕ್ರಿಯೆಯಲ್ಲಿ ಎಂ ನವೀನ್ ಕುಮಾರ್ ಅಧ್ಯಕ್ಷರಾಗಿ ಮಂಜುನಾಥ್ ಮಠದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ತಾಲೂಕು ಉಸ್ತುವಾರಿ ಗಾ.ರಾ. ಶ್ರೀನಿವಾಸ್ ಘೋಷಿಸಿದರು.
ರಾಜ್ಯ ಚುನಾವಣಾಧಿಕಾರಿ ಟೆಲೆಕ್ಸ್ ರವಿಕುಮಾರ್ ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷರನ್ನಾಗಿ ಶಿವಾನಂದ ತಗಡೂರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದೆ. ಜಿಲ್ಲೆಯಲ್ಲೂ ವೈದ್ಯನಾಥ್ ಅವರನ್ನು ಅವಿರೋಧವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ಸಂಘದ ಪ್ರತಿಯೊಬ್ಬ ಸದಸ್ಯರು ಸಂಘಕ್ಕೆ ಬದ್ಧರಾಗಿರಬೇಕು. ಸಂಘದ ಪ್ರತಿಯೊಬ್ಬ ಸದಸ್ಯರ ಕಷ್ಟಕ್ಕೆ ಸಂಘ ಸ್ಪಂದಿಸಲಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳನ್ನು ತಾಲೂಕು ಸಂಘದಿಂದ ಸನ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಕೆ ಎಸ್ ಹುಚ್ಚರಾಯಪ್ಪ, ಖಜಾಂಚಿ ರೋಹಿತ್, ಕಾರ್ಯದರ್ಶಿ ದೀಪಕ್ ಸಾಗರ್, ನಿರ್ದೇಶಕ ರಾಜರಾವ್ ಜಾಧವ್, ತಾಲೂಕು ನಿಕಟಪೂರ್ವ ಅಧ್ಯಕ್ಷ ಬಿ. ಎಲ್ ರಾಜು, ಪ್ರೆಸ್ ಟ್ರಸ್ಟ್ ಅಧ್ಯಕ್ಷ ವೈಭವ್ ಬಸವರಾಜ್, ತಾಲೂಕು ಸಂಘದ ಸದಸ್ಯರು ಉಪಸ್ಥಿತರಿದ್ದರು.
Leave a comment