ಶಿಕಾರಿಪುರ ಲೈವ್:
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬುಧವಾರ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಪಟ್ಟಣದ ತೇರುಬೀದಿಯಲ್ಲಿರುವ ಕಾಶಿ ವಿಶ್ವೇಶ್ವರ ದೇವಸ್ಥಾನ,ಕಾನೂರು ಬಸವೇಶ್ವರ ದೇವಸ್ಥಾನ ಹಾಗೂ ಹುಚ್ಚರಾಯಸ್ವಾಮಿ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನಗಳನ್ನು ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
Leave a comment