Home ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿವೆ: ಶಾಸಕ ಬಿ.ವೈ. ವಿಜಯೇಂದ್ರ
Home

ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿವೆ: ಶಾಸಕ ಬಿ.ವೈ. ವಿಜಯೇಂದ್ರ

Share
Share

ಶಿಕಾರಿಪುರ ಲೈವ್:
ಪ್ರಸ್ತುತ ಸಮಾಜದಲ್ಲಿ ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಅಂಗನವಾಡಿ ಕೇಂದ್ರಗಳಿಗೆ ಎಲ್ ಇಡಿ ಟಿವಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಅಯ್ಕೆ ಮಾಡಿ ಎಲ್ ಇಡಿ ಟಿವಿ ವಿತರಣೆ ಮಾಡುತ್ತಿದೆ. ಟಿವಿ ಸೌಲಭ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸದ್ಬಳಕೆಯಾಗಬೇಕು. ಸಾಮಾಜಿಕ‌ ಜಾಲತಾಣಗಳಲ್ಲಿ ಬರುವ ತಪ್ಪು ಸರಿ ವಿಷಯಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಜತೆ ಉತ್ತಮ ಸಂಸ್ಕಾರ ಕೊಡಬೇಕು.
ಸಮಾಜ ಹಾಗೂ ತಂದೆ ತಾಯಿಗೆ ಭಾರ ಆಗದಂತೆ ಮಕ್ಕಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಅಪೌಷ್ಠಿಕತೆಯಿಂದ ದುರ್ಬಲ ಆಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳ ಮೂಲಕ‌ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದೆ. ಸರ್ಕಾರ ಹಾಗೂ ಜನರ ಮಧ್ಯೆ ಸೇತುವೆಯಂತೆ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದರು. ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿದ್ದರು‌. ಈ ಬಾಂಡ್ ಮೆಚುರ್ ಅಗಿದ್ದು,ಹೆಣ್ಣು ಮಕ್ಕಳಿಗೆ ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಬಿ.ವೈ. ವಿಜಯೇಂದ್ರ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಮೆಚ್ ರಿಟಿ ಬಾಂಡ್ ವಿತರಿಸಿದರು.

ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಬಾಳೆಕಾಯಿ, ತಾಲೂಕು ಪಂಚಾಯಿತಿ ಇಒ ಎನ್.ಜಿ. ನಾಗರಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೇನ್ಯಾನಾಯ್ಕ, ಸಂರಕ್ಷಣಾಧಿಕಾರಿ ರತ್ನಮ್ಮ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನಿತಾ ಮೂಡೆರ್, ಮೇಲ್ವಿಚಾರಕರು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...